ನಟ ದರ್ಶನ್ ಅವರನ್ನು ಬಳ್ಳಾರಿಯ ಜೈಲಿನಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ತೀವ್ರ ಬೆನ್ನು ನೋವು ಕಾಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.
ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಅಂತೆಯೇ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದುವರೆಗೂ ದರ್ಶನ್‌ಅಪರೇಷನ್ ಮಾಡಿಸಿಕೊಂಡಿಲ್ಲ. ಸದ್ಯ ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಸ್ಪತ್ರೆಯಲ್ಲಿ ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ಈ ವಿಚಾರದ ಕುರಿತು ಸಾಮಾಜಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.
ಇನ್ನೂ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಪೊಲೀಸರು ರಾಜ್ಯ ಗೃಹ ಇಲಾಖೆಗೆ ಬೆಂಗಳೂರು ಪೊಲೀಸರು ಪತ್ರ ಬರೆದಿದ್ದಾರೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಲು ಇದೀಗ ಪೊಲೀಸರು ಹೆಜ್ಜೆಯಿಟ್ಟಿದ್ದಾರೆ.
ಮೊದಲು ಕಾನೂನು ಸಲಹೆ ಪಡೆದು ಇದೀಗ ಗೃಹ ಇಲಾಖೆಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ರಾಜ್ಯ ಗೃಹ ಇಲಾಖೆ ಈ ಪತ್ರವನ್ನು ಕಾನೂನು ಇಲಾಖೆಗೆ ರವಾನಿಸಲಿದೆ. ಕಾನೂನು ಇಲಾಖೆಗೆ ಪರಾಮರ್ಶಿಸಲು ಪತ್ರವನ್ನು ರವಾನಿಸಲಿದೆ. ಆ ನಂತರ ಗೃಹ ಇಲಾಖೆಯಿಂದ ಅನುಮತಿಯ ಬಗ್ಗೆ ತೀರ್ಮಾನವಾಗಲಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಜೂನ್ 11ರಂದು ಬಂಧಿತರಾದರು. ಸುಮಾರು 130 ದಿನಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಅವರ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್ನಲ್ಲಿ ರದ್ದಾಗಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದ ದರ್ಶನ್, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.