ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ರಾಜ್ಯದಲ್ಲಿ ಒಂದು ದಿನ ಮದ್ಯದಂಗಡಿ ಬಂದ್ ಆಗಲಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನಲಾಗಿದೆ. ಹೀಗಾಗಿ ‘ಸ್ವಚ್ಚ ಅಬಕಾರಿ ಅಭಿಯಾನ’ ಘೋಷಣೆ ಅಡಿ ಹೋರಾಟ ಮಾಡಲು ಸಜ್ಜಾಗಿದ್ದು,
ನವೆಂಬರ್ 20ರಂದು ರಾಜ್ಯವ್ಯಾಪ್ತಿ ಮದ್ಯ ಮಾರಾಟ ಸ್ಥಗಿತಗೊಳಿಸಿ ಮದ್ಯದಂಗಡಿ ಮಾಲೀಕರ ಪ್ರತಿಭಟನೆ ನಡೆಸಲಿದ್ದಾರೆ. ಹೌದು ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಹೊರತುಪಡಿಸಿ ಎಲ್ಲಾ ಬಾರ್ಗಳು ಬಂದ್ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.