ಕಾರು-ಆಟೋ ನಡುವೆ ಭೀಕರ ಅಪಘಾತ: ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವು!

Share to all

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಿಜ್ನೋರ್‌ʼನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಘಟನೆ ನಡೆದ ಸಂದರ್ಭ ಕಾರಿನಲ್ಲಿ ನವದಂಪತಿ ಸೇರಿದಂತೆ ಇತರೆ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ನವಜೋಡಿ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಅಪಘಾತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

 


Share to all

You May Also Like

More From Author