ರಾಮನಗರ:- ಇಡೀ ಕರ್ನಾಟಕವೇ ಹೆಚ್ಚು ಕುತೂಹಲದಿಂದ ಕಾದು ಕುಳಿತಿರುವ ಚನ್ನಪಟ್ಟಣ ಉಪ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದಾರೆ. ಆದರೆ ಈ ಮಧ್ಯೆಯೇ ಸಿಪಿ ಯೋಗೇಶ್ವರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ
ಪುತ್ರ ಶ್ರವಣ್ ಅವರ ಸಹಿ ನಕಲು ಮಾಡಿದ ಆರೋಪದಡಿ ಸಿಪಿ ಯೋಗೇಶ್ವರ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಪ್ರಕರಣದ ವಿಚಾರಣೆ ಬುಧವಾರ ನಡೆದಿದೆ.
ಸಿಪಿ ಯೋಗೇಶ್ವರ ಅವರ ಮೊದಲ ಪತ್ನಿ ಮತ್ತು ಪುತ್ರ ಶ್ರವಣ್ ಅವರು ಎರಡೂವರೆ ವರ್ಷದ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿಸಿದ್ದರು. ಈ ಮನೆ ಸಿಪಿ ಯೋಗೇಶ್ವರ್ ಮೊದಲ ಪತ್ನಿ ಹಾಗೂ ಶ್ರವಣ್ ಹೆಸರಲ್ಲಿದೆ. ಶ್ರವಣ್ ಹಾಗೂ ಶ್ರವಣ್ ತಾಯಿ ಇಬ್ಬರೂ ಸೇರಿ ಮನೆಯನ್ನು ನಿಶಾಗೆ ಉಡುಗೊರೆಯಾಗಿ ನೀಡಿದ್ದಾರೆ.
ಆದರೆ, ಈ ಮನೆಯಲ್ಲಿ ತನಗೂ ಭಾಗ ಬೇಕು ಎಂದು ಸಿಪಿ ಯೋಗೇಶ್ವರ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಇಷ್ಟೇ ಅಲ್ಲದೇ, “ನಾನು ನನ್ನ ಅಕ್ಕನಿಗೆ ಮನೆ ಗಿಫ್ಟ್ ನೀಡಿಲ್ಲ. ಮನೆಯಲ್ಲಿ ನನಗೂ ಭಾಗ ಬೇಕು” ಅಂತ ಶ್ರವಣ್ ಅವರ ಹೆಸರಿನಲ್ಲಿ ಸಿಪಿ ಯೋಗೇಶ್ವರ ಕೋರ್ಟ್ನಲ್ಲಿ ಅರ್ಜಿ ಹಾಕಿದ್ದಾರೆ. ಈ ಅರ್ಜಿಯಲ್ಲಿ ಶ್ರವಣ್ ಅವರ ಸಹಿಯನ್ನು ಸಿಪಿ ಯೋಗೇಶ್ವರ್ ಮಾಡಿದ್ದಾರೆ. ಹೀಗೆ, ಸಿಪಿ ಯೋಗೇಶ್ವರ್ ಪುತ್ರ ಶ್ರವಣ ಅವರ ಸಹಿ ನಕಲು ಮಾಡಿದ್ದಾರೆ.
ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ನನಗೆ ಗೊತ್ತಿಲ್ಲ. ಮನೆಯಲ್ಲಿ ಭಾಗ ಬೇಕು ಅಂತ ನಾನು ಕೇಳಿಲ್ಲ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಶ್ರವಣ್ ಹೇಳಿದ್ದಾರೆ.
ಈ ವಿಚಾರವಾಗಿ ಶ್ರವಣ ತಂದೆ ಸಿಪಿ ಯೋಗೇಶ್ವರ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇಬ್ಬರ ಸಂಭಾಷಣೆ ರೆಕಾರ್ಡ್ ಆಗಿದೆ. ಅದರಲ್ಲಿ, ಸಿಪಿ ಯೋಗೇಶ್ವರ್ ಸಹಿ ನಕಲು ಮಾಡಿದ್ದಾನ್ನು ಒಪ್ಪಿಕೊಂಡಿದ್ದಾರೆ. ಸಿಪಿ ಯೋಗೇಶ್ವರ ಮತ್ತು ಶ್ರವಣ್ ಮಾತನಾಡಿರುವ ಆಡಿಯೋ ಸಂಭಾಷಣೆ ವೈರಲ್ ಆಗಿದೆ.