ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್: ಕೌಟುಂಬಿಕ ಕಲಹದ ಶಂಕೆ!?

Share to all

ಹಾಸನ:– ಇತ್ತೀಚಿನ ದಿನಗಳಲ್ಲಿ ಸೂಸೈಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಸಣ್ಣ ಪುಟ್ಟ ವಿಚಾರಕ್ಕೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕರುಣಾಕರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದ್ದು ಪತ್ನಿ ಹಾಗೂ ಅತ್ತೆ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ.

ಇದರಿಂದಾಗಿ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಅತ್ತೆ-ಸೊಸೆ ಜಗಳದಿಂದ ಕರುಣಾಕರ ಮನನೊಂದಿದ್ದ. ಇಂದು ಬೆಳಗ್ಗೆ ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.


Share to all

You May Also Like

More From Author