ಉದ್ಯಮಿ ಗೌತಮ್ ಅದಾನಿ ವಿರುದ್ದ ಅರೆಸ್ಟ್ ವಾರೆಂಟ್ ಹೊರಡಿಸಿದ ಕೋರ್ಟ್! ಯಾಕೆ ಗೊತ್ತಾ..?

Share to all

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಅದಾನಿ, ಹಿಂಡನ್ಬರ್ಗ್ ರಿಸರ್ಚ್ ವರದಿ ಬಳಿಕ ಕುಸಿದುಹೋಗಿದ್ದ ಹೂಡಿಕೆದಾರ ಸಮೂಹದ ವಿಶ್ವಾಸ ಗಳಿಸಲು ಅದಾನಿ ಗ್ರೂಪ್ ಬಹಳಷ್ಟು ಕಸರತ್ತು ನಡೆಸಿತ್ತು. ಆದ್ರೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಸೇರಿದಂತೆ 8 ಜನರ ವಿರುದ್ಧ ಶತಕೋಟಿ ಡಾಲರ್ ವಂಚನೆ ಮತ್ತು ಲಂಚದ ಆರೋಪವನ್ನು ಅಮೆರಿಕದ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಮಾಡಿದೆ. ಭಾರತದಲ್ಲಿ ಸೌರಶಕ್ತಿಗೆ ಸಂಬಂಧಿಸಿದ ಒಪ್ಪಂದವನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ ಸುಮಾರು 2110 ಕೋಟಿ ರೂಪಾಯಿ ಲಂಚದ ಆಮಿಷ ನೀಡಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿ ಆರೋಪಿಸಿದೆ.

ಈ ಪ್ರಕರಣದಲ್ಲಿ ಗೌತಮ್ ಅದಾನಿ ಹೊರತಾಗಿ ಅವರ ಸೋದರಳಿಯ ಸಾಗರ್ ಅದಾನಿ, ವಿನೀತ್ ಎಸ್ ಜೈನ್, ರಂಜಿತ್ ಗುಪ್ತಾ, ಸಿರಿಲ್ ಕ್ಯಾಬೆನಿಸ್, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ ಮತ್ತು ರೂಪೇಶ್ ಅಗರ್ವಾಲ್ ವಿರುದ್ಧ ಲಂಚದ ಆರೋಪ ಹೊರಿಸಲಾಗಿದೆ.

ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.

ಸೋಲಾರ್ ಎನರ್ಜಿ ಗುತ್ತಿಗೆ ಪಡೆಯಲು ಲಂಚ ನೀಡಿದ ಆರೋಪ

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ಬಾಂಡ್ ಯೋಜನೆ ಕೈಬಿಟ್ಟ ಅದಾನಿ

ಅಮೆರಿಕಲ್ಲಿ ಕೋರ್ಟ್​ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್​ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್​ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್​ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ.

 


Share to all

You May Also Like

More From Author