ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯವನ್ನು ಮುಂದೂಡಲಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್ಗೆ ಸಲ್ಲಿಸಲಾಯ್ತು. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು.
6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ, ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದರು. ಅದೇ ವೈದ್ಯಕೀಯ ವರದಿಯ ಪ್ರತಿಯನ್ನು ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲಾಯ್ತು. ವರದಿ ಪರಿಶೀಲಿಸಿ ಪ್ರತಿಕ್ರಿಯಿಸಲು ಸೂಚನೆ ನೀಡಿದ ನ್ಯಾಯಮೂರ್ತಿಗಳು ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ಮುಂದೂಡಿದರು.
ಅದಲ್ಲದೆ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದು, ಹೈಕೋರ್ಟ್ನಲ್ಲಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದ್ದಾರೆ.