IPL ಮೆಗಾ ಹರಾಜಿಗೆ ಕೌಂಟ್ ಡೌನ್ ಶುರುವಾಗಿದ್ದು, ಮಾರ್ಚ್ 14 ರಿಂದ ಐಪಿಎಲ್ ಆರಂಭವಾಗಲಿದೆ. ಇನ್ನೂ IPL ಆರಂಭಕ್ಕೆ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಇದು ಒಂದು ರೀತಿಯ ಹಬ್ಬ ಅಂತಾನೇ ಹೇಳಬಹುದು.
ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್ 14 ರಿಂದ ಆರಂಭವಾಗಲಿದ್ದು, ಮೇ 25 ರಂದು ನಡೆಯಲ್ಲಿರುವ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆಬೀಳಲಿದೆ. ಇದರ ಜೊತೆಗೆ ಮುಂದಿನ ಮೂರು ಆವೃತ್ತಿಗಳ ವೇಳಾಪಟ್ಟಿಯ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, 2026 ರಲ್ಲಿ ನಡೆಯಲ್ಲಿರುವ ಐಪಿಎಲ್ ಮಾರ್ಚ್ 15 ರಿಂದ ಮೇ 31 ರವರೆಗೆ ನಡೆದರೆ, 2027 ರ ಐಪಿಎಲ್ ಮಾರ್ಚ್ 14 ರಿಂದ ಮೇ 30 ರವರೆಗೆ ನಡೆಯಲ್ಲಿದೆ.
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೂ ಬಿಸಿಸಿಐ, ಇ-ಮೇಲ್ ಮುಖಾಂತರ ಈ ಮಾಹಿತಿ ರವಾನೆ ಮಾಡಿದೆ. ಆ ಪ್ರಕಾರ, ಇದೀಗ ಮುಂದಿನ ಮೂರು ಆವೃತ್ತಿಗಳ ಆರಂಭ ಮತ್ತು ಅಂತ್ಯದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ. ಈ ಮೂರರ ಪೈಕಿ, ಮುಂದಿನ ವರ್ಷ ನಡೆಯಲ್ಲಿರುವ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿ ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ. ಇನ್ನು ಮುಂದಿನ ಆವೃತ್ತಿಯ ವಿಚಾರಕ್ಕೆ ಬರುವುದಾದರೆ… ಕಳೆದ ಮೂರು ಆವೃತ್ತಿಗಳಂತೆ ಮುಂದಿನ ಆವೃತ್ತಿಯಲ್ಲೂ 74 ಪಂದ್ಯಗಳು ನಡೆಯಲ್ಲಿವೆ ಎಂಬುದು ಬಿಸಿಸಿಐ ನೀಡಿರುವ ಮಾಹಿತಿಯಿಂದ ತಿಳಿದು ಬಂದಿದೆ.
ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಆಯೋಜಿಸಲಾಗಿದೆ. ಅಂದರೆ 2025 ರ ಐಪಿಎಲ್ ಸೀಸನ್, ಚಾಂಪಿಯನ್ಸ್ ಟ್ರೋಫಿ ಮುಗಿದ 5 ದಿನಗಳ ನಂತರ ಪ್ರಾರಂಭವಾಗಲಿದೆ. ಐಪಿಎಲ್‌ನ ಕೊನೆಯ ಸೀಸನ್ ಮಾರ್ಚ್ 23 ರಿಂದ ಪ್ರಾರಂಭವಾಗಿತ್ತು. ಆದರೆ ಈ ಬಾರಿ ಪಂದ್ಯಾವಳಿಯನ್ನು 9 ದಿನ ಮುಂಚಿತವಾಗಿ ಪ್ರಾರಂಭಿಸಲಾಗುತ್ತಿದೆ. ಪಂದ್ಯಾವಳಿಯ ಪಂದ್ಯಗಳ ಸಮಯದಲ್ಲಿ ತಂಡಗಳಿಗೆ ಗರಿಷ್ಠ ಸಮಯವನ್ನು ನೀಡುವುದು ಇದಕ್ಕೆ ಒಂದು ದೊಡ್ಡ ಕಾರಣವೆಂದು ತೋರುತ್ತದೆ. ಏಕೆಂದರೆ ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆಯಲಿದೆ.