ವಯನಾಡ್‌ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ ಪ್ರಿಯಾಂಕಾ ಗಾಂಧಿ!

Share to all

ಕೇರಳ: ಲೋಕಸಭೆಯ ವಿಪಕ್ಷನಾಯಕ ನಾಯಕ ರಾಹುಲ್ ಗಾಂಧಿಯಿಂದ ತೆರೆವಾಗಿದ್ದ ವಯನಾಡು ಲೋಕಸಭಾ ಕ್ಷೇತ್ರಕ್ಕೂ ಕೂಡ ಚುನಾವಣೆ ನಡೆದಿದ್ದು, ಇಂದೇ ಫಲಿತಾಂಶ ಹೊರಬೀಳಲಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

ವಯನಾಡು ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು, ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ.

 


Share to all

You May Also Like

More From Author