ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಭಾರೀ ಮುನ್ನಡೆ: ನಿಖಿಲ್ ಕುಮಾರಸ್ವಾಮಿಗೆ ಶಾಕ್!

Share to all

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದಲ್ಲಿ ನಿಜಕ್ಕೂ ಹಾವು-ಏಣಿ ಆಟವೇ ನಡೆಯುತ್ತಿದೆ. ಆರಂಭದ ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. ಆದರೆ 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್‌ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ಅವರಿಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ. ನಗರ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮತಗಳು ಜಾಸ್ತಿ ಇರುವ ಕಾರಣ ಕಾಂಗ್ರೆಸ್‌ಗೆ ಬಿದ್ದಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

 


Share to all

You May Also Like

More From Author