ಬೆಂಗಳೂರು:- ರಾಜ್ಯ ಸರ್ಕಾರವು ಮದ್ಯಪಾನ ಪ್ರಿಯರಿಗೆ ಗುಡ್ನ್ಯೂಸ್ ಕೊಟ್ಟಿದೆ. ಚಳಿಗಾಲದಲ್ಲಿ ಬಿಯರ್ ಮಾರಾಟ ಕುಸಿತ ಆಗುತ್ತದೆ. ಇಂಥ ಸಂದರ್ಭದಲ್ಲಿ ಬಿಯರ್ ದರ ಏರಿಕೆ ಮಾಡಿದ್ರೆ ಆದಾಯದಲ್ಲಿ ನಷ್ಟ ಉಂಟಾಗಲಿದೆ. ಹೀಗಾಗಿ ಚಳಿಗಾಲ ಶುರುವಾಗುತ್ತಿದ್ದಂತೆ ಬಿಯರ್ ಬಗ್ಗೆ ಅಬಕಾರಿ ಇಲಾಖೆಗೆ ಟೆನ್ಷನ್ ಶುರುವಾಗಿದೆ.
ಚಳಿಗಾಲದಲ್ಲಿ ಮದ್ಯಪ್ರಿಯರು ಹೆಚ್ಚಾಗಿ ಬಿಯರ್ ಕುಡಿಯಲ್ಲ. ಇದರಿಂದ ಬಿಯರ್ ಮಾರಾಟ ಕುಸಿತವಾಗುವ ಆತಂಕ ಎದುರಾಗಿದೆ. ಶೇಕಡಾ 10 ರಿಂದ 20 ರಷ್ಟು ಬಿಯರ್ ಮಾರಾಟದಲ್ಲಿ ಕುಸಿತ ಸಾಧ್ಯತೆ ಇದೆ. ಅಬಕಾರಿ ಇಲಾಖೆಗೆ ಸರ್ಕಾರ 36 ಸಾವಿರ ಕೋಟಿ ಟಾರ್ಗೆಟ್ ನೀಡಿದೆ. ಇದೇ ಕಾರಣಕ್ಕೆ ಬಿಯರ್ ದರ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಬಿಯರ್ ದರ ಏರಿಕೆಯಾದರೆ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜನವರಿವರೆಗೆ ಬೆಲೆಯಲ್ಲಿ ಯಾವುದೇ ಏರಿಕೆ ಮಾಡುವುದಿಲ್ಲ ಎಂದು ಹೇಳಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ವಾಡಿಕೆಗಿಂತ ಈ ಬಾರಿ ಹೆಚ್ಚಿನ ಚಳಿ ಬೀಳುತ್ತಿದೆ. ಇದನ್ನು ಮನಗಂಡಿರುವ ಸರ್ಕಾರ, ಚಳಿಗಾಲ ಮುಗಿಯವವರೆಗೆ ಬಿಯರ್ ದರದಲ್ಲಿ ಯಾವುದೇ ಪರಿಷ್ಕರಣೆ ಇರುವುದಿಲ್ಲ ಎಂದಿದೆ.