IPL ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯ ಆಗಿದ್ದು, RCB ಬಲಿಷ್ಟ ತಂಡವನ್ನೇ ಆರಿಸಿದೆ. ಹರಾಜಿಗೂ ಮುನ್ನ ಮೂವರನ್ನು ರಿಟೈನ್ ಮಾಡಿಕೊಂಡಿದ್ದ ಆರ್ಸಿಬಿಯು ಇದೀಗ 19 ಆಟಗಾರರನ್ನು ಖರೀದಿಸಿದೆ. ಈ 19 ಆಟಗಾರರಲ್ಲಿ 8 ವಿದೇಶಿ ಆಟಗಾರರಿದ್ದಾರೆ.
ಲಿಯಾಮ್ ಲಿವಿಂಗ್ಸ್ಟೋನ್: ಇಂಗ್ಲೆಂಡ್ ತಂಡದ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ಬಾರಿ ಲಿವಿಂಗ್ಸ್ಟೋನ್ ಅವರನ್ನು 8.75 ಕೋಟಿ ರೂ. ನೀಡಿ ಖರೀದಿಸುವಲ್ಲಿ ಆರ್ಸಿಬಿ ಯಶಸ್ವಿಯಾಗಿದೆ.
ಫಿಲ್ ಸಾಲ್ಟ್: ಕಳೆದ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಇಂಗ್ಲೆಂಡ್ನ ಸ್ಪೋಟಕ ದಾಂಡಿಗ ಫಿಲ್ ಸಾಲ್ಟ್ ಅವರನ್ನು ಈ ಬಾರಿ ಆರ್ಸಿಬಿ 11.50 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಆರ್ಸಿಬಿ ಒಪನಿಂಗ್ ಹಾಗೂ ವಿಕೆಟ್ ಕೀಪರ್ನ ಸ್ಥಾನವನ್ನು ತುಂಬಿಕೊಂಡಿದೆ.
ಜೋಶ್ ಹ್ಯಾಝಲ್ವುಡ್: ಐಪಿಎಲ್ 2023 ರಲ್ಲಿ ಆರ್ಸಿಬಿ ತಂಡದಲ್ಲಿದ್ದ ಜೋಶ್ ಹ್ಯಾಝಲ್ವುಡ್ ಕಳೆದ ಸೀಸನ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಮತ್ತೆ ಐಪಿಎಲ್ಗೆ ಮರಳಿರುವ ಆಸ್ಟ್ರೇಲಿಯಾ ವೇಗಿಯನ್ನು ಆರ್ಸಿಬಿ 12.50 ಕೋಟಿ ರೂ. ನೀಡಿ ಖರೀದಿಸಿದೆ
ಟಿಮ್ ಡೇವಿಡ್: ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಹೊಡಿಬಡಿ ದಾಂಡಿಗ ಟಿಮ್ ಡೇವಿಡ್ ಅವರನ್ನು ಆರ್ಸಿಬಿ ಫ್ರಾಂಚೈಸಿಯು 3 ಕೋಟಿ ರೂ.ಗೆ ಖರೀದಿಸುವಲ್ಲಿ ಯಶಸ್ವಿಯಾಗಿದೆ.
ರೊಮಾರಿಯೊ ಶೆಫರ್ಡ್: ವೆಸ್ಟ್ ಇಂಡೀಸ್ನ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಈ ಬಾರಿಯ ಮೆಗಾ ಹರಾಜಿನಲ್ಲಿ ಕೇವಲ 1.5 ಕೋಟಿ ರೂ. ನೀಡಿ ರೊಮಾರಿಯೊ ಅನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಆರ್ಸಿಬಿ ಯಶಸ್ವಿಯಾಗಿದೆ.
ಜೇಕೊಬ್ ಬೆಥೆಲ್: ಇಂಗ್ಲೆಂಡ್ನ ಯುವ ಆಲ್ರೌಂಡರ್ನನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 2.6 ಕೋಟಿ ರೂ. ನೀಡಿ ಖರೀದಿಸಿದೆ.
ನುವಾನ್ ತುಷಾರ: ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ ಕಳೆದ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರು. ಈ ಬಾರಿ ಆರ್ಸಿಬಿ ಫ್ರಾಂಚೈಸಿ ನುವಾನ್ ಅವರನ್ನು 1.6 ಕೋಟಿ ರೂ. ನೀಡಿ ಖರೀದಿಸಿದೆ.