ಕುಸ್ತಿಪಟು ಬಜರಂಗ್ ಪುನಿಯಾ 4 ವರ್ಷ ಬ್ಯಾನ್! ಒಲಿಂಪಿಕ್ಸ್‌ ಪದಕ ವಿಜೇತ ಮಾಡಿದ ತಪ್ಪೇನು!?

Share to all

ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ 4 ವರ್ಷ ಬ್ಯಾನ್ ಮಾಡಲಾಗಿದೆ. ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯು, ಮೂತ್ರದ ಮಾದರಿ ಪರೀಕ್ಷೆಗೆ ಕೊಡದ ಅವರನ್ನು ಬ್ಯಾನ್ ಮಾಡಿದೆ.ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು.

ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು.ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ.


Share to all

You May Also Like

More From Author