ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಪ್ರಿಯಾಂಕಾ ಗಾಂಧಿ!

Share to all

ನವದೆಹಲಿ: ವಯನಾಡು​ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭಾ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು.

ಅವರು ಕೇರಳದ  ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ಪ್ರಿಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.  ಪ್ರಿಯಾಂಕಾ ಗಾಂಧಿ ಅವರು ನವೆಂಬರ್​ 29ರಂದು ವಯನಾಡ್​ಗೆ ತೆರಳಲಿದ್ದು, ಡಿಸೆಂಬರ್​ 1 ರಂದು ತಮ್ಮ ಕ್ಷೇತ್ರದಲ್ಲಿ ಮೆಗಾ ರೋಡ್​ ಶೋ ನಡೆಸುವ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

 

 


Share to all

You May Also Like

More From Author