ಮಂಡ್ಯ:– ಬಾರ್ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪದಡಿ ಎಫ್ಐಆರ್ ದಾಖಲಾದರೆ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ.ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ. ಎಫ್ಐಆರ್ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ.
ದೂರುದಾರ ಸಲ್ಲಿಸಿರುವ ಅಧಿಕಾರಿ ಮತ್ತು ದೂರುದಾರನ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಚಿವರ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಚಾರ ಇಟ್ಟುಕೊಂಡು ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಬಾರ್ ಲೈಸೆನ್ಸ್ನಲ್ಲಿಯೂ ಲಂಚ ವಸೂಲಿ ನಡೆಯುತ್ತಿದೆ. ಸಚಿವರ ಮುಂದಾಳತ್ವದಲ್ಲೇ ಅಧಿಕಾರಿಗಳು ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ದೂರಿನ ವಾಸ್ತವತೆ ಅರಿಯಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ. ದೂರುದಾರ ಪುನೀತ್ ನೀಡಿರುವ ಸಾಕ್ಷ್ಯಗಳ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.