ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ ಎಂದು ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ.
ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ, ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತಾ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಎಂದರು.