ಯತ್ನಾಳ್‌ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ: ಎಂ.ಪಿ ರೇಣುಕಾಚಾರ್ಯ

Share to all

ಬೆಂಗಳೂರು: ಯತ್ನಾಳ್‌ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಘಟನೆ ಸಾಮರ್ಥ್ಯವನ್ನು ರಾಜ್ಯದ ಅಧ್ಯಕ್ಷರು ಈಗಾಗಲೇ ತೋರಿಸಿದ್ದಾರೆ. ನಿಮ್ಮ ಹರುಕು ಬಾಯಿ, ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ.

ಬಿಜೆಪಿಯ ಸೋಲಿಗೆ ನೀವೇ ಕಾರಣ. ನರೇಂದ್ರ ಮೋದಿಗಿಂತ ನೀನು ದೊಡ್ಡ ಮನುಷ್ಯ ಆಗಬಿಟ್ಯಾ? ವಕ್ಪ್ ಹೋರಾಟಕ್ಕೆ ಶೋಭಾ, ಪ್ರಹ್ಲಾದ್ ಜೋಷಿ ಬೆಂಬಲ ಕೊಟ್ಟಿದ್ದಾರೆ ವಿನಃ ನಿಮಗಲ್ಲ. ಪರ್ಯಾಯ ನಾಯಕತ್ವ ಸೃಷ್ಟಿಗೆ ಬೆಂಬಲ ಕೊಟ್ಟರಾ? ಪಕ್ಷ ಚಿಹ್ನೆ ನಿಮಗೆ ಕೊಟ್ಟವರು ಯಾರು? ವಿನಾಕಾರಣ ಸಂಘರ್ಷಕ್ಕೆ ಇಳಿದಿದ್ದಾರೆ.

ನಿನಗೆ ತಾಕತ್ ಇದ್ದರೆ ಯಾರು ಆ ರಾಷ್ಟ್ರೀಯ ನಾಯಕ ನಿನಗೆ ಅನುಮತಿ ಕೊಟ್ಟರು ಹೇಳು? ನಿಮ್ಮ ನಡವಳಿಕೆ ಸರಿಯಾಗಿಲ್ಲ ಅಂದರೆ ವರಿಷ್ಠರ ಭೇಟಿ ಮಾಡಿ ನಿಮ್ಮ ಉಚ್ಚಾಟನೆಗೆ ಒತ್ತಾಯ ಮಾಡಬೇಕಾಗುತ್ತದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಅವರು ವಾಗ್ದಾಳಿ ನಡೆಸಿ


Share to all

You May Also Like

More From Author