ನೆಲಕ್ಕೆ ಉರುಳಿದ ಮಹಾರಾಷ್ಟ್ರ ಸಾರಿಗೆ ಬಸ್: 9 ಮಂದಿ ಸ್ಪಾಟ್ ಡೆತ್, ಹಲವರು ಗಂಭೀರ!

Share to all

ಮಹಾರಾಷ್ಟ್ರ:-ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡ ಘಟನೆ ಜರುಗಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ ಏಕಾಏಕಿ ಎದುರಿಗೆ ಬಂದಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಬಿದ್ದಿದೆ. ಪರಿಣಾಮ 9 ಜನರು ಸ್ಥಳದಲ್ಲಿಯೇ ಮೃತಪಟ್ಟು ಹಲವಾರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ

ಎದುರಿಗೆ ಸಡನ್ ಆಗಿ ಬಂದ ಬೈಕ್​ಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬೇರೆ ಕಡೆ ತಿರುಗಿದ ಬಸ್​ ಅಪಘಾತಕ್ಕೆ ಈಡಾಗಿದೆ. ಎಂದು ಹೇಳಲಾಗುತ್ತಿದೆ. ದುರ್ಘಟನೆಯನ್ನು ನೋಡಿದ ಸ್ಥಳೀಯರು ಕೂಡಲೇ ಸಂಬಂಧಪಟ್ಟ ಇಲಾಖೆಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಇನ್ನು ಅಪಘಾತ ಆಗುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎಂದು ತಿಳಿದು ಬಂದಿದೆ


Share to all

You May Also Like

More From Author