ಸರ್ಕಾರದ ವಿರುದ್ಧ ಧಾರವಾಡದಲ್ಲಿ ಅನ್ನದಾತರ ಆಕ್ರೋಶ. ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರ ವಿರುದ್ಧ ಧಿಕ್ಕಾರ.

Share to all

ಸರ್ಕಾರದ ವಿರುದ್ಧ ಧಾರವಾಡದಲ್ಲಿ ಅನ್ನದಾತರ ಆಕ್ರೋಶ.
ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರ ವಿರುದ್ಧ ಧಿಕ್ಕಾರ

ಧಾರವಾಡ:-ಬ್ಯಾಂಕ್ ಅಧಿಕಾರಿಗಳ ಕಿರುಕುಳದಿಂದ ಮಹದೇವಪ್ಪ ಜಾವೂರ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾಲಾ ಮನ್ನಾ ಸೇರಿ ಕುಟುಂಬಕ್ಕೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ. ಧಾರವಾಡದಲ್ಲಿ ರೈತರು ಬೀದಿಗೆ ಇಳಿದು ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ನಗರದ ಕಲಾಭವನದಿಂದ ಮೆರವಣಿಗೆ ನಡೆಸಿ ಅನ್ನದಾತರು ರಾಜ್ಯ
ವಿರುದ್ಧ, ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳದ ಮಹದೇವಪ್ಪ ಜಾವೂರ ರೈತ ಕೆವಿಜಿ ಬ್ಯಾಂಕನ ಅಧಿಕಾರಿಗಳ ಕಿರುಕುಳದಿಂದ ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಕೆವಿಜಿ ಬ್ಯಾಂಕನಲ್ಲಿ ಮಹದೇವಪ್ಪ ಅವರು ಸಾಲ ಹೊಂದಿದ್ದರು. ಆದರೆ ಈಗ ಬರಗಾಲ ಬಿದಿದ್ದು, ರೈತನ ಬದುಕು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಬ್ಯಾಂಕ ಅಧಿಕಾರಿಗಳು ರೈತರಿಗೆ ಸಾಲ ಮರುಪಾವತಿ ಹೆಸರಿನಲ್ಲಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ರೈತರಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ, ಈ ಸರ್ಕಾರದ ರೈತ ವಿರೋಧಿ ನೀತಿಯಿಂದ ಅನ್ಮದಾತರು ಬೀದಿಗೆ ಬೀಳುವ ಸ್ಥತಿ ನಿರ್ಮಾಣವಾಗಿದೆ. ಹಾಗಾಗಿ ಈ ಕೂಡಲೇ ಸರ್ಕಾರ ಹಾಗೂ ಕೆವಿಜಿ ಬ್ಯಾಂಕ್ ಮೃತ ರೈತನ ಸಾಲಾ ಮನ್ಮಾ ಮಾಡಿ, ಕುಟುಂಬಕ್ಲೆ ಪರಿಹಾರ ನೀಡಬೇಕು, ವಿದ್ಯುತ್ ಅಕ್ರಮ ಸಕ್ರಮವನ್ನು ಮುಂದುವರೆಸಬೇಕು. ಸಮರ್ಪಕ ವಿದ್ಯುತ್ ಪೂರೈಸಬೇಕು.

ಇವುಗಳ ಜೊತೆ ಉಳಿದ ಅನ್ನದಾತರ ಸಮಸ್ಯೆಗಳ ಕುರಿತು ಸರ್ಕಾರ ಸ್ಪಂದನೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಕಡೆ ನಾವು ಯೋಚನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು…..

ಉದಯ ವಾರ್ತೆ ಹುಬ್ಬಳ್ಳಿ.


Share to all

You May Also Like

More From Author