ಸಿಲಿಂಡರ್ ಸೋರಿಕೆ ಪ್ರಕರಣ..ಚಿಕಿತ್ಸೆ ಫಲಿಸದೇ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವು..ಮೃತರ ಸಂಖ್ಯೆ 5 ಕ್ಕೆ ಏರಿಕೆ..

Share to all

ಸಿಲಿಂಡರ್ ಸೋರಿಕೆ ಪ್ರಕರಣ..ಚಿಕಿತ್ಸೆ ಫಲಿಸದೇ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವು..ಮೃತರ ಸಂಖ್ಯೆ 5 ಕ್ಕೆ ಏರಿಕೆ..

ಹುಬ್ಬಳ್ಳಿ:-ಹುಬ್ಬಳ್ಳಿಯ ಉಣಕಲ್ಲ ಗ್ರಾಮದಲ್ಲಿ ಸಿಲೆಂಡರ ಸೋರಿಕೆಯಾಗಿ ತೀವ್ರವಾಗಿ ಗಾಯಗೊಂಡಿದ್ದ ಒಂಬತ್ತು ಮಾಲಾದಾರಿಗಳಲ್ಲಿ ನಾಲ್ಕು ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.ಈಗ ಮತ್ತೊಬ್ಬ ಮಾಲಾಧಾರಿ ಸಾವನ್ನಪ್ಪಿದ್ದು ಮೃತರ ಸಂಖ್ಯೆ ಐದಕ್ಕೇರಿದಂತಾಗಿದೆ.

ಕಳೆದ ಒಂದು ವಾರದಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ಶಂಕರ ಚವಾಣ್ ಮಾಲಾಧಾರಿ ಇಂದು ಬೆಳೆಗ್ಗೆ ಕೊನೆಯುಸಿರೆಳೆದಿದ್ದಾನೆ.
ಈ ಹಿಂದೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ರಾಜು ಸೇರಿದಂತೆ ನಾಲ್ಕು ಜನರು ಸಾವನ್ನಪ್ಪಿದ್ದರು.

ಮಾಲಾಧಿಗಾರಿಗಳ ಜೀವ ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು ಮಾಡಿದ್ದ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಗಳು ಪ್ರಯತ್ನ ಪಟ್ಟಿದ್ದರು ಅಲ್ಲದೇ
ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಬೆಂಗಳೂರಿನಿಂದ ತಜ್ಞ ವೈದ್ಯರನ್ನ ಸಚಿವ ಸಂತೋಷ ಲಾಡ್ ಮತ್ತು ಸರ್ಕಾರ ಪ್ರಯತ್ನ ಪಟ್ಟಿತ್ತು.
ಆದ್ರೆ ದುರಾದೃಷ್ಟವಶಾತ್ ಬದುಕುಳಿಯಲಿಲ್ಲ ಆ ಮಾಲಾಧಿಗಾರಿಗಳು.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author