ಹುಬ್ಬಳ್ಳಿ ಗ್ಯಾಸ್ ದುರಂತ ಪ್ರಕರಣ : ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೋರಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ.ಲಾಡ್ ಮನವಿಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ*
ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲು ಮುಖ್ಯಮಂತ್ರಿಗಳ ಆದೇಶ.
*ನೊಂದ ಕುಟುಂಬಗಳ ನೆರವಿಗೆ ನಿಂತ ಸಚಿವ ಸಂತೋಷ್ ಲಾಡ್*
ಬೆಂಗಳೂರು : ಹುಬ್ಬಳ್ಳಿಯ ಉಣಕಲ್ ಬಳಿಯ ಅಚ್ಚವ್ವನ ಕಾಲೋನಿಯಲ್ಲಿ ಕಳೆದ ವಾರ ಸಂಭವಿಸಿದ ಸಿಲಿಂಡರ್ ಸ್ಫೋಟ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾತಿಯಾಗದೇ ಅಸುನೀಗಿದ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳ ನೆರವಿಗೆ ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಎಸ್ ಲಾಡ್ ಅವರು ನಿಂತಿದ್ದಾರೆ.
ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಲಾಡ್ ಅವರು ಮೃತರ ಕುಟುಂಬಗಳ ಸಂಕಷ್ಟ ವಿವರಿಸಿ, ಸಾಧ್ಯವಾದಷ್ಟು ಹೆಚ್ಚಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೊಡಿವಂತೆ ಮನವಿ ಮಾಡಿದ್ದಾರೆ.
