ಧಾರವಾಡ ಜಿಲ್ಲೆಯಲ್ಲಿನ ಜೂಜಾಟ ಪ್ರಕರಣ 27 ಪ್ರಕರಣ ದಾಖಲು..
ಧಾರವಾಡ
ನಿನ್ನೆ ತಡ ರಾತ್ರಿಜೂಜಾಟದ ದಾಳಿ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣ
ಧಾರವಾಡ ಎಸ್ಪಿ ಗೋಪಾಲ ಬ್ಯಾಕೋಡ ಪ್ರತಿಕ್ರಿಯೆ.
ನಿನ್ನೆ ತಡರಾತ್ರಿ 1 ಗಂಟೆಗೆ ಅಧಿಕಾರಿಗಳು ಗಸ್ತಿನಲ್ಲಿದ್ದರು.
ಆ ವೇಳೆ ನರೇಂದ್ರ ಶಾಲೆ ಬಳಿಯಲ್ಲಿ ಜೂಜಾಟ ನಡೆದ ಮಾಹಿತಿ ಬಂದಿತ್ತು.
ಆಗ ನಮ್ಮ ಸಿಬ್ಬಂದಿ ದಾಳಿ ಮಾಡಿದ್ದರು.ಆಗ ಸಿಬ್ಬಂದಿ ಮೇಲೆ ಕೆಲವರು ದಾಳಿ ಮಾಡಿದ್ದಾರೆ.
ಸದ್ಯ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದಲ್ಲಿ 8 ಜನರ ಬಂಧನ ಆಗಿದೆ.
ಉಳಿದವರ ಪತ್ತೆ ಕಾರ್ಯ ನಡೆದಿದೆ.ಇನ್ನೂ ಹತ್ತು ಜನ ಶಂಕಿತರಿದ್ದಾರೆ.
ರೇಡ್ ವೇಳೆ ಕಾನ್ಸಟೆಬಲ್ ನಾಗರಾಜ್ ಎಂಬುವವರ ತಲೆಗೆ ಪೆಟ್ಟಾಗಿದೆ.ಪಿಎಸ್ಐ ಬಸನಗೌಡರಿಗೆ ಕೈ ಮತ್ತು ಕುತ್ತಿಗೆಗೆ ಗಾಯವಾಗಿದೆ.
ಇಬ್ಬರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಒಟ್ಟಾರೆ 3-4 ದಿನದಲ್ಲಿ 27 ಜೂಜಾಟದ ಪ್ರಕರಣ ದಾಖಲಾಗಿವೆ.236 ಜನರಿಗೆ ಬಂಧಿಸಲಾಗಿದೆ.3.38 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ.
ಉದಯ ವಾರ್ತೆ ಧಾರವಾಡ