*ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಆಗಸ್ಟ್ 20 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ*
*ಧಾರವಾಡ (ಕರ್ನಾಟಕ ವಾರ್ತೆ) ಆ.19:* ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆಯೂ ಆಗಸ್ಟ್ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಆದೇಶ ಹೊರಡಿಸಿದ್ದಾರೆ.
