ಇನಾಂವೀರಾಪುರ ಗ್ರಾಮಕ್ಕೆ ಜಿಲ್ಲಾಧಿಕಾರಿ, ಶಾಸಕರ ಭೇಟಿ…ಪರಿಸ್ಥಿತಿ ಅವಲೋಕನ..

Share to all

ಇನಾಂವೀರಾಪುರ ಗ್ರಾಮಕ್ಕೆ ಜಿಲ್ಲಾಧಿಕಾರಿ, ಶಾಸಕರ ಭೇಟಿ…ಪರಿಸ್ಥಿತಿ ಅವಲೋಕನ..

ಹುಬ್ಬಳ್ಳಿ:-ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ಸಂಪೂರ್ಣ ಗ್ರಾಮ ವಿಕ್ಷಣೆ ಮಾಡಿದರು. ಈ ವೇಳೆ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ ಇದ್ದರು.

ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ ಬಳಿಕ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಪ್ರಕರಣದ ಹಿನ್ನೆಲೆ, ಸಾಮಾಜಿಕ ಪರಿಸ್ಥಿತಿ ಹಾಗೂ ಕುಟುಂಬದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ದೌರ್ಜನ್ಯದಂತಹ ಘಟನೆಗಳು ಮರುಕಳಿಸದಂತೆ ಗ್ರಾಮಮಟ್ಟದಲ್ಲಿ ಮುನ್ನೆಚ್ಚರಿಕೆ ಮತ್ತು ಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯ ಕುರಿತು ಪೊಲೀಸ್ ಇಲಾಖೆಯು ತ್ವರಿತವಾಗಿ ಕ್ರಮ ಕೈಗೊಂಡಿದ್ದು, ತನಿಖೆಯನ್ನು ಗಂಭೀರವಾಗಿ ನಡೆಸಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಹೇಳಿದರು.

ಶಾಸಕರಾದ ಎಂ. ಆರ್. ಪಾಟೀಲ ಅವರು ಮಾತನಾಡಿ, ಈ ಗ್ರಾಮವು ನಮ್ಮ ವ್ಯಾಪ್ತಿಗೆ ಬರುವಂತಹ ಗ್ರಾಮ ಇಲ್ಲಿ ಈ ರೀತಿಯಾಗಿ ನಡೆದಿರುವ ಘಟನೆ ಅತ್ಯಂತ ನೋವಿನ ಸಂಗತಿ ಯಾಗಿದೆ ಮತ್ತು ಇಂತಹ ಅಪರಾಧಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭಾ. ಪಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ಹುಬ್ಬಳ್ಳಿ ಗ್ರಾಮೀಣ ಪೊಲೀಸ ಠಾಣೆ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಉಪಸ್ಥಿತರಿದ್ದರು.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author