16 ವರ್ಷದ ಬಾಲಕನ ಶಂಕಾಸ್ಪದ ಸಾವು, ಕೊಲೆ ಶಂಕೆ?

Share to all

16 ವರ್ಷದ ಬಾಲಕನ ಶಂಕಾಸ್ಪದ ಸಾವು, ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಪೂಜಾರ ಓಣಿಯ 16 ವರ್ಷದ ಬಾಲಕನೊಬ್ಬ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದು, ಮೇಲ್ನೋಟಕ್ಕೆ ಇದು ಕೊಲೆ ಪ್ರಕರಣವಾಗಿರಬಹುದೆಂದು ಶಂಕಿಸಲಾಗಿದೆ.

ಮೃತನನ್ನು ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು.

ವಿಷಯ ತಿಳಿದ ತಕ್ಷಣ ಕುಂದಗೋಳ ಪೊಲೀಸರು ಸ್ಥಳಕ್ಕೆ ಎಸ್ಪಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆ ಮುಂದುವರಿದಿದೆ. ಪೊಲೀಸ್ ತನಿಖೆ ಪೂರ್ಣಗೊಂಡ ನಂತರವಷ್ಟೇ ಇದು ಕೊಲೆಯೇ ಅಥವಾ ಸಾವಿಗೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ನಿಖರ ಸತ್ಯಾಂಶ ಹೊರಬೀಳಲಿದೆ. ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.


Share to all

You May Also Like

More From Author