ವಿನಯ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ.. ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ…

Share to all

ವಿನಯ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ.. ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ…

ಧಾರವಾಡ:-ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ಜಾಮೀನು ಹಾಗೂ ಶಿಕ್ಷೆಗೆ ತಡೆಯಾಜ್ಞೆ ಕೋರಿರುವ ಅರ್ಜಿಯ ಅಂತಿಮ ತೀರ್ಪುನ್ನು ಇಂದು ಧಾರವಾಡ ಹೈಕೋರ್ಟ್ ಪ್ರಕಟಿಸಲಿದೆ…

2016 ರ ಜೂನ್ 15 ರಂದು ಧಾರವಾಡದ ಸಪ್ತಾಪುರದಲ್ಲಿರುವ ಅವರದೇ ಜಿಮ್ ಹೊರಗಡೆ ಯೋಗೀಶಗೌಡ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು.ಆ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪಾತ್ರವಿದೆ ಇದೆ ಎಂದು ಆರೋಪ ಪಟ್ಟಿ ಸಲ್ಲಿಸಿ ಆರೆಸ್ಟ್ ಮಾಡಲಾಗಿತ್ತು.

ಸಿಬಿಐ ನ್ಯಾಯಾಲಯವು ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರನ್ನು ದೋಷಿ ಎಂದು ತೀರ್ಪು ನೀಡಿ ಜೈಲು ಶಿಕ್ಷೆ ವಿಧಿಸಿತ್ತು.ಈ ಶಿಕ್ಷೆಯನ್ನು ಪ್ರಶ್ನಿಸಿ ಹಾಗೂ ಮದ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ಮೆಟ್ಟಲೇರಿದ್ದಾರೆ..

ಜನಪ್ರತಿನಿಧಿಗಳ ಕಾಯ್ದೆಯನ್ವಯ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಶಿಕ್ಷೆಯಾದರೆ ಶಾಸಕ ಸ್ಥಾನ ರದ್ದಾಗುವ ಭೀತಿಯಿರಯವುದರಿಂದ ಇಂದು ಹೈಕೋರ್ಟ್ ನೀಡುವ ತೀರ್ಪು ವಿನಯ ಕುಲಕರ್ಣಿ ಅವರ ರಾಜಕೀಯ ಜೀವನ ಹಾಗೂ ಶಾಸಕತ್ವದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.

ಇಂದು ಪ್ರಕಟವಾಗಲಿರುವ ಹೈಕೋರ್ಟ್ ತೀರ್ಪಿನ ಮೇಲೆ ಇಡೀ ಧಾರವಾಡ ಜಿಲ್ಲೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲವಿದೆ.

ಉದಯ ವಾರ್ತೆ ಧಾರವಾಡ.


Share to all

You May Also Like

More From Author