ಹೆತ್ತ ತಾಯಿಯೇ ಮೂರು ಹೆತ್ತ ಮಕ್ಕಳಿಗೆ ವಿಷ ಉಣಿಸಿ..ತಾಯಿಯೂ ವಿಷ ಕುಡಿದು ಸಾವು ಬದುಕಿನ ನಡುವೆ ಹೋರಾಟ…
ಧಾರವಾಡ:-ಮೂವರು ಮಕ್ಕಳಿಗೆ ವಿಷ ನೀಡಿದ ತಾಯಿ ಬಳಿಕ ತಾನೂ ವಿಷ ಸೇವಿಸಿದ ಘಟನೆ
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ತಾಯಿ ತನ್ನ ಮೂವರು ಮಕ್ಕಳಿಗೆ ವಿಷ ನೀಡಿದ ಬಳಿಕ ತಾನೂ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಸವಿತಾ ಕುರಗುಂದ (38) ಎಂಬ ಮಹಿಳೆ ತನ್ನ ಮಕ್ಕಳಾದ ಗದಿಗೆವ್ವ ಕುರಗುಂದ (8), ಭಾಗ್ಯಶ್ರೀ ಕುರಗುಂದ (6) ಹಾಗೂ ಹರ್ಷ (2) ಅವರಿಗೆ ವಿಷ ನೀಡಿದ ಬಳಿಕ ತಾನೂ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ತಾಯಿ ಸೇರಿದಂತೆ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯರು ಕೂಡಲೇ ನಾಲ್ವರನ್ನೂ ಧಾರವಾಡದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ನಾಲ್ವರಿಗೂ ಕಿಮ್ಸ್‌ನಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.