ಹುಬ್ಬಳ್ಳಿಯಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಜಾಲ ಪತ್ತೆ…ಗೋಕುಲ್ ರೋಡ್ ಪೊಲೀಸರ ಭರ್ಜರಿ ಕಾರ್ಯಾಚರಣೆ..

Share to all

ಹುಬ್ಬಳ್ಳಿಯಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಜಾಲ ಪತ್ತೆ…ಗೋಕುಲ್ ರೋಡ್ ಪೊಲೀಸರ ಭರ್ಜರಿ ಕಾರ್ಯಾಚರಣೆ..

ಹುಬ್ಬಳ್ಳಿ:
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಗೋಕುಲ್ ರೋಡ್ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ರಘು ಕೃಷ್ಣನ್ ತಂದೆ ರಾಮಸ್ವಾಮಿ, ರಾಜಕುಮಾರ್ ತಂದೆ ಶ್ರೀನಿವಾಸನ್ ಹಾಗೂ ಪ್ರವೀಣ್ ವಿಜಯ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಬರೋಬ್ಬರಿ
ಒಂದು ಕೆಜಿ 300 ಗ್ರಾಂ ಎಂಡಿಎಂಎ ಮಾದಕ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಮಾದಕ ವಸ್ತುಗಳ ಮೌಲ್ಯ ಒಂದು ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.
ಬಂಧಿತ ರಘು ಕೃಷ್ಣನ್ ಹಾಗೂ ಪ್ರವೀಣ್ ವಿಜಯ್ ಶೆಟ್ಟಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೂ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಡ್ರಗ್ಸ್ ಸಪ್ಲೈ!
ಕಾಲೇಜು ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ಪಾರ್ಟಿ ಆಯೋಜಕರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಈ ಡ್ರಗ್ಸ್ ಜಾಲ, ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕ ಸಾಧಿಸಿ ಮಾದಕ ವಸ್ತುಗಳನ್ನು ಪೂರೈಸುತ್ತಿತ್ತು ಎನ್ನಲಾಗಿದೆ. ಈ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆಗೆ ಕಮಿಷನರ್ ಮೆಚ್ಚುಗೆ!

ಹುಬ್ಬಳ್ಳಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲೇ ದೊಡ್ಡ ಮಟ್ಟದ ಡ್ರಗ್ಸ್ ಜಾಲಗಳಲ್ಲಿ ಒಂದನ್ನು ಪತ್ತೆಹಚ್ಚಿದ ಪೊಲೀಸರ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರಿಗೆ ನಗದು ಬಹುಮಾನ ಘೋಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಪೊಲೀಸರು ನಡೆಸಿದ ಈ ಕಾರ್ಯಾಚರಣೆ ಮಾದಕ ವಸ್ತುಗಳ ಜಾಲಕ್ಕೆ ದೊಡ್ಡ ಹೊಡೆತ ನೀಡಿದೆ.

ಉದಯ ವಾರ್ತೆ
ಹುಬ್ಬಳ್ಳಿ


Share to all

You May Also Like

More From Author