ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಅಪಘಾತ ವಾಹನ ಸವಾರ ಸ್ಥಳದಲ್ಲಿಯೇ ಸಾವು.ಹಿಂಬದಿ ಸವಾರ ಸ್ಥಿತಿ ಚಿಂತಾಜನಕ.
ಹುಬ್ಬಳ್ಳಿ:- ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ ಕುಸುಗಲ್ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು ಬೈಕ್ ಬಸ್ಸಿನ ಚೆಸ್ಸಿ ಒಳಗಡೆ ಸೇರಿಕೊಂಡಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಪರಿಸ್ಥಿತಿ ಚಿಂತಾ ಜನಕವಾಗಿದೆ.ಗಾಯಾಳುವನ್ನು ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲಾ ಎನ್ನಲಾಗಿದೆ. ಸರಕಾರಿ ಬಸ್ಸು ಕುಸುಗಲ್ ಕಡೆಯಿಂದ ಹುಬ್ಬಳ್ಳಿ ಕಡೆ ಬರುವಾಗ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಆಯ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ.ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಬಂದಿದ್ದು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ.