ನೂತನ ವರ್ಷದ ಶ್ರೀ ದುರ್ಗಾ ಡೆವಲಪರ್ಸ್ ಕ್ಯಾಲೆಂಡರ್ ಬಿಡುಗಡೆ ಮಾಡಿದ ಶಾಸಕ ಅಬ್ಬಯ್ಯ.
ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರಖ್ಯಾತ ಶ್ರೀ ದುರ್ಗಾ ಡೆವಲಪರ್ಸ್ ಹಾಗೂ ಪ್ರಮೋಟರ್ಸ್ ವತಿಯಿಂದ ಜರುಗಿದ ನೂತನ ವರ್ಷ 2024ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಇಂದು ವಿದ್ಯಾನಗರದ ಕೇಂದ್ರ ಕಚೇರಿಯಲ್ಲಿ ಸರಳವಾಗಿ ಜರುಗಿತು.
ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ , ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಜೊತೆಗೆ ಶ್ರೀ ದುರ್ಗಾ ಡೆವಲಪರ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೀರೇಶ್ ಉಂಡಿ,ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಹಾಜರಿದ್ದರು.ಈ ವೇಳೆ ಮಾತನಾಡಿದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೀರೇಶ್ ಉಂಡಿ ನಾಡಿನ ಜನತೆಗೆ ಶುಭ ಹಾರೈಸಿ ಸಾರ್ವಜನಿಕರಿಗೆ ಕ್ಯಾಲೆಂಡರ್ ಬಿಡುಗಡೆ ಗೊಳಿಸುವ ಮೂಲಕ ನೂತನ ವರ್ಷದ ಶುಭಾಶಯಗಳನ್ನು ಕೋರಿದ್ದು ಬರುವ ದಿನಗಳು ಜನರಿಗೆ ಒಳಿತನ್ನು ಮಾಡಲಿ ಎಂದು ಹಾರೈಸಿದ್ದಾರೆ.
ಇನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ವಿವಿಧ ಬಡಾವಣೆ ನಿರ್ಮಿಸುತ್ತಿರುವ ಶ್ರೀ ದುರ್ಗಾ ಡೆವಲಪರ್ಸ್ ಉತ್ತರ ಕರ್ನಾಟಕದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಹೊಂದಿದ್ದು ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ
ಉದಯ ವಾರ್ತೆ ಹುಬ್ಬಳ್ಳಿ.