ಹೆಬ್ಬಳ್ಳಿ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರ ಸ್ಥಳದಲ್ಲೇ ಸಾವು.ಸಂತೆಗೆ ಹೋದವ ಮನೆ ಮುಟ್ಟಲಿಲ್ಲಾ.
ಧಾರವಾಡ: ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹಾಗೂ ತಲವಾಯಿ ರಸ್ತೆ ಮಧ್ಯೆ ಸಂಭವಿಸಿದೆ.
ತಲವಾಯಿ ಗ್ರಾಮದ ಬಸವರಾಜ ಜಟ್ಟಣ್ಣವರ (32) ಎಂಬ ವ್ಯಕ್ತಿಯೇ ಈ ಅಪಘಾತದಲ್ಲಿ ಸಾವನ್ನಪ್ಪಿದವನು. ಹೆಬ್ಬಳ್ಳಿ ಗ್ರಾಮದಲ್ಲಿದ್ದ ಸಂತೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಬಸವರಾಜನ ಬೈಕ್‌ಗೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ಇದರಿಂದ ತಲೆಗೆ ಗಂಭೀರ ಪೆಟ್ಟಾಗಿ ಬಸವರಾಜ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.