ಪತ್ನಿ ಮಾಡಿದ ಟಿಕ್ ಟಾಕ್ ನೋಡಿದ ಪತಿ.ಮನನೊಂದು ಆತ್ಮಹತ್ಯೆಗೆ ಶರಣು.ಇದ್ಯಾವ ಸೀಮೆಯ ಗಂಡ ಎಂದ ಜನರು.

Share to all

ಪತ್ನಿ ಮಾಡಿದ ಟಿಕ್ ಟಾಕ್ ನೋಡಿದ ಪತಿ.ಮನನೊಂದು ಆತ್ಮಹತ್ಯೆಗೆ ಶರಣು.ಇದ್ಯಾವ ಸೀಮೆಯ ಗಂಡ ಎಂದ ಜನರು.

ಚಾಮರಾಜನಗರ: ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ವೈರಲ್ ಟಿಕ್ ಟಾಕ್ ಗೆ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ದಾಖಲಾಗಿದೆ.

ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ. ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉದಯ ವಾರ್ತೆ ಚಾಮರಾಜನಗರ


Share to all

You May Also Like

More From Author