ಸಾರಿಗೆ ಸಿಬ್ಬಂದಿಗಳ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಸಿಬ್ಬಂದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಹತ್ವದ ಯೋಜನೆಗಳನ್ನು ಜಾರಿ ಮಾಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು –
ರಾಜ್ಯದ ಸಾರಿಗೆ ಸಿಬ್ಬಂದಿಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಗೆದುಕೊಂಡು ಬಂದಿದೆ.ಹೌದು ದುಬಾರಿಯಾದ ಇಂದಿನ ದುನಿಯಾದಲ್ಲಿ ಆರ್ಥಿಕವಾಗಿ ಯಾವುದೇ ಸಮಸ್ಯೆಯನ್ನು ಅನುಭವಿಸುತ್ತಾ ಶಿಕ್ಷಣದಿಂದ ವಂಚಿತವಾಗಬಾರದು ಹಾಗೇ ದೊಡ್ಡ ದೊಡ್ಡ ಶಿಕ್ಷಣ ದುಡ್ಡಿದ್ದವರಿಗೆ ಮಾತ್ರವಾಗದೆ ಎಲ್ಲರಿಗೂ ಸಿಗಲಿ ಯಾರು ಕೂಡಾ ಉನ್ನತವಾದ ಶಿಕ್ಷಣದಿಂದ ವಂಚಿತವಾಗಬಾರದೆಂಬ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೆಲವೊಂದಿಷ್ಟು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಿ ಜಾರಿಗೆ ತಗೆದುಕೊಂಡು ಬಂದಿದೆ.ಹೌದು ಸಾರಿಗೆ ವಿದ್ಯಾ ಚೇತನ ಯೋಜನೆಯ ಮೂಲಕ ಹಲವಾರು ಮಹತ್ವದ ಆರ್ಥಿಕ ಪ್ರೋತ್ಸಾಹದ ಯೋಜನೆಗಳನ್ನು ಜಾರಿಗೆ ತರಲಾಗಿದೆ.ವಿದ್ಯಾರ್ಥಿ ವೇತನಗಳನ್ನು ನಾಲ್ಕು ಪಟ್ಟು ಹೆಚ್ಚಳವನ್ನು ಮಾಡಿ ಕಲಿಕಾ ವಿಭಾಗಗಳನ್ನು ಸೇರ್ಪಡೆ ಮಾಡಲಾಗಿದೆ.ಇದರೊಂದಿಗೆ ಇನ್ನೂ ಕೆಲವೊಂದಿಷ್ಟು ಮಹತ್ವದ ಯೋಜನೆಗಳನ್ನು ಜಾರಿಗೆ ತಗೆದುಕೊಂಡು ಬಂದು ಸಾರಿಗೆ ಇಲಾಖೆಯ ನೌಕರರ ಪ್ರತಿಭಾವಂತ ಮಕ್ಕಳ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರ ದಾರಿ ದೀಪವಾಗುತ್ತಿದೆ.
ಉದಯ ವಾರ್ತೆ ಬೆಂಗಳೂರು