ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.
ಹುಬ್ಬಳ್ಳಿ:-ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಧಾರವಾಡ ಲೋಕಸಭಾ ಕ್ಷೇತ್ರದ ಕುರುಬ ಸಮುದಾಯದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದ ಮೂರನೇ ಅತೀ ದೊಡ್ಡ ಸಮುದಾಯ ಕುರುಬ ಸಮುದಾಯ. ಈ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕೊಡುವ ಸಂಭಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಅಲ್ಲದೇ ಬಿಜೆಪಿ ಪಕ್ಷದಲ್ಲಿ ಕುರುಬ ಸಮುದಾಯಕ್ಕೆ ವಿವಿಧ ಸ್ಥಾನಮಾನಗಳನ್ನು ನೀಡಿದ್ದೇವೆ.ಮುಂದಿನ ದಿನಮಾನಗಳಲ್ಲಿ ಇನ್ನಷ್ಟು ಸ್ಥಾನಮಾನಗಳನ್ನು ಕೊಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ.ಮಹೇಶ.ಟೆಂಗಿನಕಾಯಿ. ಎಂ.ಆರ್.ಪಾಟೀಳ ಮಾಜಿ ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ. ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.