ಲೋಕಸಭೆ ಅಖಾಡಕ್ಕಿಳಿಯಲು ದಿಂಗಾಲೇಶ್ವರ ಸ್ವಾಮೀಜಿ ರೆಡಿ..? ನಾಳೆ ಅಥವಾ ನಾಡಿದ್ದು ಘೋಷಣೆ.
ಹುಬ್ಬಳ್ಳಿ:-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಚುನಾವಣಾ ಸ್ಪರ್ಧೆ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಭಕ್ತರು, ಸ್ವಾಮೀಜಿಗಳ ಅಭಿಪ್ರಾಯವನ್ನು ಸಂಗ್ರಹಿಸಿರುವ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಬದಲಾವಣೆಯ ಗಾಳಿ ಸುದ್ದಿಯ ಬೆನ್ನಲ್ಲೇ ವಿನೋದ ಅಸೂಟಿ ಬಿ ಫಾರಂ ಗಿಟ್ಟಿಸಿಕೊಂಡಿದ್ದಾರೆ.ಹೀಗಾಗಿ ದಿಂಗಾಲೇಶ್ವರ ಶ್ರೀ ಗಳಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಅನಿವಾರ್ಯವಾಗಿದೆ.
ಈ ಗೊಂದಲದ ನಡುವೆ ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದೇ ಸೂಕ್ತ ಎಂದು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ನಾಳೆ ಅಥವಾ ನಾಡಿದ್ದು ಬೆಂಗಳೂರಿನಲ್ಲಿ ಶ್ರೀಗಳು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಉದಯ ವಾರ್ತೆಗೆ ನಂಬಲರ್ಹ ಮೂಲಗಳು ಖಚಿತಪಡಿಸಿವೆ.