ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ಆರೆಸ್ಟ್ .SIT ಕಛೇರಿಗೆ ಕರೆದುಕೊಂಡು ಹೋದ ಅಧಿಕಾರಿಗಳು.
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದು, SIT ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಹೆಚ್.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನೆ ಬಳಿ ಹೋಗಿದ್ದರು. ಈ ವೇಳೆ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದರು.
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೇಕು. ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಇತಿಹಾಸದಲ್ಲೇ ಇದುವರೆಗೆ ಯಾರೂ ಜೈಲಿಗೆ ಹೋದ ಉದಾಹರಣೆಯೇ ಇಲ್ಲ. ಇದೇ ಮೊದಲ ಬಾರಿಗೆ ದೇವೇಗೌಡರ ಪ್ರಿಯಪುತ್ರ ಹೆಚ್.ಡಿ.ರೇವಣ್ಣ ಅರೆಸ್ಟ್ ಆಗಿದ್ದಾರೆ.