ಹುಬ್ಬಳ್ಳಿ-ಧಾರವಾಡ ಅಸಮರ್ಥ ಪೋಲೀಸ ಅಧಿಕಾರಿಗಳ ಬದಲಾವಣೆಗೆ ಆಗ್ರಹ.ಕಾಂಗ್ರೆಸ್ ನಾಯಕನಿಂದಲೇ ಹೋಮ್ ಮಿನಿಸ್ಟರಗೆ ಪತ್ರ.
ಹುಬ್ಬಳ್ಳಿ:-ಹುಬ್ಬಳ್ಳಿ ಧಾರವಾಡ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಬದಲಾವಣೆಗೆ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಗೃಹ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಪತ್ರದ ಸಾರಾಂಶ ಹೀಗಿದೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿದ್ದು, ಅವಳಿನಗರದ ಪೊಲೀಸ್ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಕಾರಣ ಪೊಲೀಸ್ ಇಲಾಕೆಯ ಉನ್ನತ ಅಧಿಕಾರಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಬೇಕು ಎಂದು ಕೇಳಿಕೊಳ್ಳುತೇನೆ.
ಕುಮಾರಿ ನೇಹಾ ಹಿರೇಮಠ ಸಾವಿನ ನಂತರ ವಿದ್ಯಾಭ್ಯಾಸ, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳಿಸಲು ಪಾಲಕರು ಹಾಗೂ ಕುಟುಂಬಸ್ಥರು ಹಿಂಜರಿಯುವ ಸಮಯ ಇಲ್ಲಿ ನಿರ್ಮಾಣವಾಗಿದ್ದು, ಪದೆ ಪದೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳು ಮತ್ತಷ್ಟು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ನಿರ್ಮಾಣವಾಗಿದೆ.
ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ,ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡು ಪೊಕರಿಗಳನ್ನು ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದು ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಿ ಕಾನೂನು ಸುವವ್ಯಸ್ತೆ ಕಾಪಾಡಬೇಕು ಎಂದು ಮನವಿ