ವಾಹನ ಚಲಿಸುತ್ತಿದ್ದಾಗಲೇ ಡ್ರ್ಯೆವರ್ ಗೆ ಹಾಟ್೯ ಅಟ್ಯಾಕ್. ನಿಯಂತ್ರಣ ತಪ್ಪಿ ಲಾರಿ ಅಪಘಾತ ಸ್ಥಳದಲ್ಲಿಯೇ ಚಾಲಕ ಸಾವು .
ಗುಂಡ್ಲುಪೇಟೆ –
ಲಾರಿ ಚಲಿಸುತ್ತಿದ್ದಾಗಲೇ ಚಾಲಕನೊಬ್ಬನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಲಾರಿ ಚಾಲನೆಯ ಸಮಯದಲ್ಲಿ ಚಾಲಕನಿಗೆ ಹೃದಯಾಘಾತವಾಗಿದ್ದು ನಂತರ ಗೂಡ್ಸ್ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡ್ರೈವಿಂಗ್ ವೇಳೆಯೇ ಹೃದಯಾಘಾತವಾಗಿದ್ದರ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕೆ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.ತಮಿಳುನಾಡು ಮೂಲದ ಸೆಲ್ವರಾಜ್ (50) ಮೃತ ಚಾಲಕನಾಗಿದ್ದು ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ಲಾರಿ ಚಾಲಕನಿಗೆ ಹೃದಯಾಘಾತವಾಗಿತ್ತು. ಪರಿಣಾಮ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಡ್ರ್ಯೆವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸುದ್ದಿಯನ್ನು ತಿಳಿದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಉದಯ ವಾರ್ತೆ ಗುಂಡ್ಲಪೇಟೆ