ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಭಂಗ ಮಾಡುವ/ ಸಾರ್ವಜನಿಕರಿಗೆ ಭೀತಿ ಉಂಟುಮಾಡುವ ಉದ್ದೇಶದಿಂದ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಿರುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಮೀಷನರ್ ಶಶಿಕುಮಾರ ಹೇಳಿದ್ದಾರೆ..
ಕಮೀಷನರ್ ಹೇಳಿದ ಬೆನ್ನಲ್ಲೇ ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಯಾರ್ಡ್ ನಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನ ದಲ್ಲಿ ಮಾರಕಾಸ್ತ್ರವನ್ನು ಇಟ್ಟುಕೊಂಡು ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಪಿಐ ಶ್ರೀ ಸಮಿವುಲ್ಲಾ ಕೆ. ರವರ ನೇತೃತ್ವದ ಸಿಬ್ಬಂದಿಗಳನ್ನು ಒಳಗೊಂಡ ತಂಡವು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ವಾಹನದಲ್ಲಿ ಎರಡು ತಲವಾರ್ ಕಂಡುಬಂದಿದ್ದು, ಮಾರಕಾಸ್ತ್ರವನ್ನು ವಶಪಡಿಸಿಕೊಂಡು, ಆರೋಪಿಯನ್ನ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ವ್ಯಕ್ತಿ ತಿಪ್ಪಣ್ಣ ಭೀಮಪ್ಪ ಶಿಶನಳ್ಳಿ. ಸಾ- ರಾಯಪುರ, ಧಾರವಾಡ. 25 ವರ್ಷ ಎನ್ನಲಾಗಿದೆ.
APMC ನವನಗರ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಮಾನ್ಯ ಪೊಲೀಸ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.