ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರೇಮ್ ಕಂಟ್ರೋಲ್ ಗೆ ಕಟ್ಟಪ್ಪಣೆ ಮಾಡಿದ CM – ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ನೀಡಿದ್ರು ಎಚ್ಚರಿಕೆ ಸಂದೇಶ

Share to all

ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರೇಮ್ ಕಂಟ್ರೋಲ್ ಗೆ ಕಟ್ಟಪ್ಪಣೆ ಮಾಡಿದ CM – ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ನೀಡಿದ್ರು ಎಚ್ಚರಿಕೆ ಸಂದೇಶ

ಬೆಂಗಳೂರು –

ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮ್ಯ ತುರ್ತು ಸಭೆ ಮಾಡಿದರು.ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸ್ ಇಲಾಖೆಯ ಮುಖ್ಯಸ್ಥರೊಂದಿಗೆ ಸಭೆ ಮಾಡಿದರು.ಡ್ರಗ್ಸ್,ಬೆಟ್ಟಿಂಗ್,ಇಸ್ಪೀಟ್ ನಿಲ್ಲದಿದ್ದರೆ SP,IG ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

SP, DCP,IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ಬಳಿಕ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಕಟ್ಟು ನಿಟ್ಟಾಗಿ ಕೆಲವೊಂದಿಷ್ಟು ಕ್ರಮಗಳ ಕುರಿತಂತೆ ಚರ್ಚೆಯನ್ನು ಮಾಡಿದರು ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಲಾಗುತ್ತದೆ.

SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು.ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ಇನ್ನೂ ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಇನ್ನೂ ನಿಂತಿಲ್ಲ.ಡ್ರಗ್ಸ್ ಮಾರೋರು ಯಾರು ರೌಡಿಗಳು ಯಾರು ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತದೆ.ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು.

ಪೊಲೀಸರಿಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲದಂತಾಗಿದ್ದು ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದು ಎಚ್ಚರಿಸಿದರು. ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು.ಇದನ್ನು ಸರಿಪಡಿಸಿಕೊಳ್ಳಿ ಎಂದು ಸೂಚನೆ ನೀಡಿದರು.ಇನ್ನು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂಧಿಸಿ ಶುಭ ಹಾರೈಸಿದರು. ಈ ಒಂದು ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ ಸೇರಿದಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಉದಯ ವಾರ್ತೆ
ಬೆಂಗಳೂರು.


Share to all

You May Also Like

More From Author