NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಣೆ: ನಿರ್ಮಲಾ ಸೀತಾರಾಮನ್

Share to all

ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಲೋಕಸಭೆಯಲ್ಲಿ ತಮ್ಮ 7ನೇ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಎನ್​ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್​ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ ಎಂದರು.

ಅದಲ್ಲದೆ   ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದ ಅವರು, ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್​ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.

 

 


Share to all

You May Also Like

More From Author