ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆದಿದೆ. ದರ್ಶನ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ನಟ ದರ್ಶನ್ ಮನೆ ಊಟ, ಮನೆಯ ಹಾಸಿಗೆ ಹಾಗೂ ಪುಸ್ತಕ ನೀಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.
ಈ ಮೂಲಕ ಮನೆ ಊಟ ಸೌಲಭ್ಯ ಪಡೆಯುವ ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಶಾಕ್ ನೀಡಲಾಗಿದೆ. ಇನ್ನು ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಗೆ ಯಾವುದೇ ವಿಶೇಷ ಸೌಲಭ್ಯ ಇಲ್ಲ. ಸಾಮಾನ್ಯ ಕೈದಿಗಳಿಗೆ ನೀಡುವ ಊಟವೇ ದರ್ಶನ್ ಗೆ ನೀಡಲಾಗುತ್ತದೆ.