ಅನುದಾನ ಸದ್ಭಳಕೆ ತಪ್ಪೆಸಗಿದರೆ ಕಠಿಣ ಕ್ರಮʼ
ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಎಚ್ಚರಿಕೆ..
ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಲೆಪ್ಟ ರೈಟ್ ತೆಗೆದುಕೊಂಡ ಸಚಿವರು
ಧಾರವಡ. ಸರ್ಕಾರದ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಭಳಕೆ ಮಾಡಿಕೊಳ್ಳಬೇಕು. ತಪ್ಪೆಸೆಗಿದರೆ ಕಠಿಣ ಕ್ರಮ ಎದುರಿಸಬೇಕಾದೀತು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳ ಕುರಿತಾದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳನ್ನು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು. ಸರ್ಕಾರ ಸಕಾಲಕ್ಕೆ ಒದಗಿಸಲಾದ ಅನುದಾನ ಸದ್ಭಳಕೆ ಮಾಡಿಕೊಳ್ಳದ ಅಧಿಕಾರಿಗಳ ಮೇಲೂ ಹರಿಹಾಯ್ದರು.
ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೆಪ್ಪಂಬರ್‌ನಲ್ಲಿ ಕೊನೆಗೊಂಡ ಎರಡನೇ ತ್ರೈಮಾಸಿಕ ಕೆಡಿಪಿ- ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಡೆಸಿದ ಸಚಿವ ಸಂತೋಷ್ ಲಾಡ್, ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡದ ಇಲಾಖಾಧಿಕಾರಿಗಳಿಗೆ ಚಳಿ ಬಿಡಿಸಿದರು.
ʻಆವರಿಸಿರುವ ಬರ ಗಂಭೀರವಾಗಿ ಪರಿಗಣಿಸಿʼ
ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಪ್ರಯತ್ನಿಸಬೇಕು. ಜಿಲ್ಲೆಯಲ್ಲಿ ಆವರಿಸಿರುವ ಬರವನ್ನು ಗಂಭೀರವಾಗಿ ಪರಿಗಣಿಸಿ, ರೈತರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ನೋಡಿಕೊಲ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕರಾದ ಎನ್.ಎಚ್. ಕೋನರೆಡ್ಡಿ, ಮಹೇಶ ಟೆಂಗಿನಕಾಯಿ ಮತ್ತು ಎಂ.ಆರ್. ಪಾಟೀಲ್ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಉದಯ ವಾರ್ತೆ ಧಾರವಾಡ