ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಎಫ್ಐಆರ್ ದಾಖಲಾಗಿದೆ. ಯಾದಗಿರಿಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ಪಿಎಸ್ಐ ಪರಶುರಾಮ್ ಅವರ ಪತ್ನಿ ಶ್ವೇತಾ ನೇರ ಆರೋಪ ಮಾಡಿದ್ದರು. ಪರಶುರಾಮ್ ಸಾವು ಪ್ರರಕರಣ ಸಂಬಂಧ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮತ್ತು ಅವರ ಪುತ್ರ ಪಂಪಣ್ಣಗೌಡ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬೆನ್ನಲ್ಲೇ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಸರ್ಕಾರ ಆದೇಶಿಸಿದ ಮರುದಿನವೇ ಡಿವೈಎಸ್ಪಿ ಪುನೀತ ನೇತೃತ್ವದ ಸಿಐಡಿ ತನಿಖಾ ತಂಡ ಯಾದಗಿರಿಗೆ ಭೇಟಿ ಕೊಟ್ಟಿದೆ. ಯಾದಗಿರಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಿಐಡಿ ತಂಡ ಈಗಾಗಲೇ ಡಿವೈಎಸ್ಪಿ ಕಚೇರಿಯಲ್ಲಿ ಕೇಸ್ಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡಿದೆ. ಇಂದೇ ಪೊಲೀಸರಿಂದ ಕೇಸ್ ಫೈಲ್ ಪಡೆದು, ತನಿಖೆ ಚುರುಕುಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.