ಬೆಂಗಳೂರು: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಬಿಡದಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.