ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಕೊಲೆ ತನಿಖೆಯಲ್ಲಿ ರಿವಿಲ್ ಆಯ್ತು ಅತಿ ದೊಡ್ಡ ರಹಸ್ಯ

Share to all

ನಟಿ ಪವಿತ್ರಾ ಗೌಡ, ನಟ ದರ್ಶನ್​ ಹಾಗೂ ಅವರ ಗ್ಯಾಂಗ್​ನವರು ಭಾಗಿ ಆಗಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಹೊಸ ಹೊಸ ಮಾಹಿತಿಗಳು ಹೊರಬರುತ್ತಿವೆ. ಈ ಕೇಸ್​ನಲ್ಲಿ ಈಗಾಗಲೇ ಅನೇಕರ ವಿಚಾರಣೆ ಮಾಡಲಾಗಿದೆ. 17 ಜನರನ್ನು ನ್ಯಾಯಾಂಗ ಬಂಧನದಲ್ಲಿಟ್ಟು ತನಿಖೆ ಮಾಡಲಾಗುತ್ತಿದೆ. ದೇಶಾದ್ಯಂತ ಸುದ್ದಿ ಆಗಿರುವ ಈ ಕೇಸ್​ನಲ್ಲಿ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.

ಎ2 ಆಗಿರುವ ದರ್ಶನ್​ ಮನೆಯಲ್ಲಿ ವಶಪಡಿಸಿಕೊಂಡ ನೀಲಿ ಬಣ್ಣದ ಜೀನ್ಸ್​ ಪ್ಯಾಂಟ್​ ಮತ್ತು ಕಪ್ಪು ಬಣ್ಣದ ರೌಂಡ್​ ನೆಕ್​ ಶರ್ಟ್​ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.ಎಫ್​ಎಸ್​ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಇದು ಅತ್ಯಂತ ಮಹತ್ವಪೂರ್ಣ ಸಾಕ್ಷ್ಯ ಆಗುತ್ತಿದೆ. ಎಫ್​ಎಸ್​ಎಲ್ ತಂಡದವರು ಜಪ್ತಿ ಮಾಡಿದ್ದ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಇದೆ.

 


Share to all

You May Also Like

More From Author