ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

Share to all

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪದಕದ ಆಸೆ ಹುಟ್ಟಿಸಿದ್ದ ವಿನೇಶ್ ಫೋಗಟ್​​ ಅವರು ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡ ಬೆನ್ನಲ್ಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದರು.

ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ.


Share to all

You May Also Like

More From Author