ಅಪಾಯದಲ್ಲಿ ತುಂಗಭದ್ರಾ ಡ್ಯಾಂ: ಸಾರ್ವಜನಿಕರ ಪ್ರವೇಶ ನಿಷೇಧ, ಆತಂಕದಲ್ಲಿ ಜನ!

Share to all

ಕೊಪ್ಪಳ:- ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ತುಂಗಭದ್ರಾ ಜಲಾಶಯದ 19ನೇ ಗೇಟ್ ತುಂಡರಿಸಿದೆ. ಸದ್ಯ ಡ್ಯಾಂ ತೀರದಲ್ಲಿ ಭಾರೀ ಅಪಾಯ ಮುನ್ಸೂಚನೆ ಎದುರಾಗಿದೆ. ಅತ್ತ ಕ್ರೆಸ್ಟ್​ ಗೇಟ್​ ತುಂಡರಿಸಿದಂತೆ ಅಧಿಕಾರಿಗಳು ಹೈ ಅಲರ್ಟ್​ ಆಗಿದ್ದು, ತುಂಗಭದ್ರಾ ಜಲಾಶಯದ ವೈಕುಂಠ ಅಥಿತಿ ಗೃಹದಲ್ಲಿ ಹೈ-ವೋಲ್ಟೇಜ್ ಮೀಟಿಂಗ್ ಕರೆಯಲಾಗಿದೆ

ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ನ ಚೈನ್‌ಲಿಂಕ್ ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನೀರಾವರಿ ಇಲಾಖೆಯ ಉನ್ನತ ಅಧಿಕಾರಿಗಳು ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದು, ನೀರಿನ ಹೊರಹರಿವಿನ ಪ್ರಮಾಣವನ್ನ 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ್ರೆ ಬಳಿಕ ತುಂಡಾದ ಚೈನ್‌ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3-4 ದಿನವಾದ್ರೂ ಬೇಕು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ವರ್ಷಗಳ ಬಳಿಕ ಆಣೆಕಟ್ಟು ಭರ್ತಿಯಾಗಿರುವ ಕಾರಣ ವಾರಾಂತ್ಯದ ದಿನಗಳಲ್ಲಿ ತಂಡೋಪ ತಂಡವಾಗಿ ಜನ ಪ್ರತಿವಾರವೂ ಬರುತ್ತಿದ್ದರು. ಸೆಲ್ಪಿ ತೆಗೆದುಕೊಂಡು ‌ಖುಷಿಪಡುತ್ತಿದ್ದರು. ಆದ್ದರಿಂದ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೇತುವೆ ಮೇಲೆ ಅತಿ ಗಣ್ಯವ್ಯಕ್ತಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ‌ ನಿರ್ಬಂಧ ಹೇರಲಾಗಿದೆ.


Share to all

You May Also Like

More From Author