ಅಗ್ನಿಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್!

Share to all

ಸ್ಯಾಂಡಲ್​ವುಡ್​ ಖ್ಯಾತ ನಟ ದಿ. ಸುಧೀರ್​ ಅವರ 2ನೇ ಮಗ ತರುಣ್​ ಸುಧೀರ್ ಇಂದು ವಿವಾಹ ಸಂಭ್ರಮದಲ್ಲಿದ್ದಾರೆ. ನಟಿ ಸೋನಲ್​ ಮೊಂತೆರೊ ಅವರನ್ನು ವರಿಸಿದ್ದಾರೆ. ಬೆಂಗಳೂರಿನ ಪೂರ್ಣಿಮಾ ಪಾಲೇಸ್‍ ನಲ್ಲಿ ಬೆಳಗ್ಗೆ 10.50ಕ್ಕೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್‌ ಸುಧೀರ್‌ ಹಾಗೂ ನಟಿ ಸೋನಲ್‌ ಮಂಥೆರೊ ಮದುವೆಯಾಗಿದ್ದಾರೆ.

ತರುಣ್‌ ಸುಧೀರ್‌ ಹಾಗೂ ಸೋನಲ್ ಮದುವೆಯೂ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್​ನಲ್ಲಿ ನಡೆಯುತ್ತಿದೆ. ನಿನ್ನೆ ಸ್ಟಾರ್ ಜೋಡಿದ ಆರತಕ್ಷತೆ ಸಮಾರಂಭಕ್ಕೆ ಸಿನಿಮಾ ತಾರೆಯರು, ರಾಜಕೀಯ ಗಣ್ಯರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದರು. ಇಂದು ಕೂಡ ಹಲವಾರು ಸೆಲೆಬ್ರಿಟಿಗಳು ತರುಣ್‌ ಸುಧೀರ್‌ ಹಾಗೂ ಸೋನಲ್ ಮದುವೆಯಲ್ಲಿ ಭಾಗಿಯಾಗಿದ್ದಾರೆ.


Share to all

You May Also Like

More From Author