ಮೈಸೂರು:- ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯದ 126 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದೆ. ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಒಂದು ತಿಂಗಳ ಹಿಂದೆ ಅಮಾನತು ಆಗಿದ್ದ ಸಲೀಂ ಪಾಷಾ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯದ ಜೊತೆಗೆ ದಾಖಲೆಗಳ ಸೋರಿಕೆ ಮಾಡಿರುವ ಶಂಕೆಯ ಆರೋಪಗಳ ಹಿನ್ನೆಲೆ ಅಮಾನತುಗೊಳಿಸಲಾಗಿತ್ತು. ಹೀಗಿರುವಾಗ 2024ನೇ ಸಾಲಿನ ಸಿಎಂ ಪದಕ ಪಟ್ಟಿಯಲ್ಲಿ ಸಲೀಂ ಪಾಷಾ ಅವರ ಹೆಸರು ಬಂದಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಒಟ್ಟಾರೆ ಒಬ್ಬ ಭ್ರಷ್ಟರಿಗೆ ಇಂತಹ ಪದಕ ಕೊಟ್ಟಿದ್ದು ಸರಿ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.